ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ಒಳ ಮೀಸಲಾತಿ ಜಾರಿ ಮಾಡುವಂತೆ ಸಚಿವರ ಮನೆ ಮುಂದೆ ಪ್ರತಿಭಟನೆ

ಚಳ್ಳಕೆರೆ : ಡಿ.15 ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಶನಿವಾರ ಸಚಿವ ಡಿ.ಸುಧಾಕರ್ ಮನೆ ಮುಂದೆ ತಮಟೆ ಚಳುವಳಿ ಪ್ರತಿಭಟನೆ ನಡೆಸಿದರು.

ಮಾದಿಗ ಸಮುದಾಯದ ಮೂರು ದಶಕದ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿ ಮಾಡಲು ಆಯಾ ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡಿದೆ. ಈ ನಿಟ್ಟಿನಲ್ಲಿ ತೆಲಂಗಾಣ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ನಮ್ಮ ರಾಜ್ಯದಲ್ಲೂ ಸರ್ಕಾರ ಸಚಿವ ಸಂಪುಟದಲ್ಲಿ ಒಳ ಮೀಸಲು ಜಾರಿಗೆ ನಿರ್ಣಯ ಕೈಗೊಳ್ಳಬೇಕು. ಒಳ ಮೀಸಲು ಜಾರಿ ಆಗುವ ತನಕ ಎಲ್ಲ ಹುದ್ದೆಗಳ ನೇಮಕಾತಿ ತಡೆಹಿಡಿಯಬೇಕು ಎಂದು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

14/12/2024 03:24 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ