ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಾಲಮಿತಿಯಲ್ಲಿ ಕಿಲ್ಲರ್ ಬೈಪಾಸ್ ಕಾಮಗಾರಿ ಮುಗಿಸಲು ಸೂಚಿಸಿದ ಡಾ.ಶಾಲಿನಿ ರಜನೀಶ

ಧಾರವಾಡ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಶನಿವಾರ ಬೆಳಿಗ್ಗೆ, ನರೇಂದ್ರ ಕ್ರಾಸ್‌ನಿಂದ ಗಬ್ಬೂರಿನವರೆಗೆ ನಡೆಯುತ್ತಿರುವ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಾಷ್ಷ್ರೀಯ ಹೆದ್ದಾರಿ 48 ರಲ್ಲಿ ಧಾರವಾಡದ ನರೇಂದ್ರ ಕ್ರಾಸ್ ದಿಂದ ಹುಬ್ಬಳ್ಳಿಯ ಗಬ್ಬೂರವರೆಗೆ ಬರುವ ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆ ಅಗಲೀಕರಣದ ಕಾಮಗಾರಿಗೆ ಮೊದಲ ಹಂತದಲ್ಲಿ ಅಗತ್ಯವಿರುವ ಭೂಮಿ ಸ್ವಾದೀನಪಡಿಸಿಕೊಂಡು ನೀಡಿದರೂ, ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿರುವುದು ಕಂಡುಬರುತ್ತಿದೆ. ಯಾವುದೇ ವಿಳಂಬವಿಲ್ಲದೇ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಡಾ.ಶಾಲಿನಿ ರಜನೀಶ ಅವರು ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಂದಿನ 15 ದಿನಗಳಲ್ಲಿ ಬಾಕಿ ಇರುವ ಕಾಮಗಾರಿ ಪೂರ್ತಿಗೊಳಿಸಿ, ತಮಗೆ ದಾಖಲೆ ಸಲ್ಲಿಸುವಂತೆ ಮತ್ತು ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.

ಕಾಮಗಾರಿ ಗುಣಮಟ್ಟದಾಗಿರಬೇಕು. ಕಳಪೆ ಕಾಮಗಾರಿ ಆಗಲು ಅವಕಾಶವಾಗದಂತೆ ಪ್ರತಿ ಹಂತದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮೇಲುಸ್ತುವಾರಿ, ನೀಗಾ ವಹಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಗುತ್ತಿಗೆದಾರರು ಒಪ್ಪಂದದಂತೆ 2025 ರ ಡಿಸೆಂಬರ್‌ದೊಳಗೆ ಈ ರಸ್ತೆ ಕಾಮಗಾರಿಯನ್ನು ಪೂರ್ಣವಾಗಿಸಿ, ಸಾರ್ವಜನಿಕರ ಸಂಚಾರಕ್ಕೆ ಷಟ್ಪಥದ ರಸ್ತೆಗಳನ್ನು ಮುಕ್ತವಾಗಿಸಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರ ಕಾಮಗಾರಿಯನ್ನು ನಿರಂತರವಾಗಿ ಕೈಗೊಂಡು ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಬೇಕು ಮತ್ತು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದರು.

ಕೆಲಗೇರಿ ಬಳಿಯ ರೈಲ್ವೆ ಮೇಲ್ಸೇತುವೆ ಹತ್ತಿರ ಪರಿಶೀಲಿಸಿ, ಇಲ್ಲಿನ ಕಾಮಗಾರಿ ಬೇಗ ಪ್ರಾರಂಭಿಸಬೇಕು. ಸಾರ್ವಜನಿಕರ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಸೇತುವೆ ಅಗಲೀಕರಣ ಕಾಮಗಾರಿ ಆದಷ್ಟು ಬೇಗ ಮಾಡಬೇಕು ಎಂದು ಸೂಚಿಸಿದರು.

ಡಿಸಿ ದಿವ್ಯ ಪ್ರಭು, ಹೆದ್ದಾರಿ 48 ರ ವಿಶೇಷ ಭೂಸ್ವಾದೀನ ಅಧಿಕಾರಿ ದೇವರಾಜ ಆರ್., ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ್ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.

Edited By : Abhishek Kamoji
Kshetra Samachara

Kshetra Samachara

14/12/2024 04:32 pm

Cinque Terre

6.19 K

Cinque Terre

0

ಸಂಬಂಧಿತ ಸುದ್ದಿ