ಚಿತ್ರದುರ್ಗ : ಮುಖ್ಯಮಂತ್ರಿ, ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸವನ್ನು ಸರ್ಕಾರದ ಹೆಸರಲ್ಲಿ ಖರೀದಿಸುವ ಪ್ರಕ್ರಿಯೆ ಪೂರ್ಣಗೊಂಡಿತು.
ವಿ.ಪಿ. ಬಡಾವಣೆಯಲ್ಲಿರುವ ಮನೆಯನ್ನು ಹಿರಿಯ ಪುತ್ರ ಎಸ್.ಎನ್. ಕಿರಣ್ ಶಂಕರ್ ಸರ್ಕಾರದ ಪರವಾಗಿ ರಾಜ್ಯಪಾಲರ ಹೆಸರಿಗೆ ನೋಂದಣಿ ಮಾಡಿಸಿದರು.ನಿಜಲಿಂಗಪ್ಪ ಅವರ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದಲೇ ಖರೀದಿಸುವ ಪ್ರಯತ್ನಗಳು 18 ವರ್ಷಗಳಿಂದ ಪ್ರಗತಿಯಲ್ಲಿದ್ದವು. ಆದರೆ, ವಿವಿಧ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. 2022ರಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿವಾಸ ಖರೀದಿಸುವ ಪ್ರಯತ್ನ ಅಂತಿಮ ಹಂತಕ್ಕೆ ಬಂದಿತ್ತು
ಈ ನಿವಾಸ ಅಮೆರಿಕದಲ್ಲಿರುವ ನಿಜಲಿಂಗಪ್ಪ ಅವರ ಮೊಮ್ಮಗ ವಿನಯ್ ಅವರ ಹೆಸರಿನಲ್ಲಿತ್ತು. ಅವರು ತಮ್ಮತ್ತ ತಂದೆ, ನಿಜಲಿಂಗಪ್ಪ ಅವರ ಪುತ್ರ ಎಸ್.ಎನ್.ಕಿರಣ್ ಶಂಕರ್ ಅವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ನೀಡಿದ್ದರು. ಅದನ್ನು ಪರಿಗಣಿಸಿ ನಗರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಪಕ್ರಿಯೆ ಪೂರ್ಣಗೊಳಿಸಲಾಯಿತು.
PublicNext
14/12/2024 05:16 pm