ಸಿದ್ದಾಪುರ : ಯಲ್ಲಾಪುರದ ವೈ.ಟಿ.ಎಸ್.ಎಸ್. ಸಭಾಂಗಣದಲ್ಲಿ ಶನಿವಾರ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು . ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲೂಕಿನ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕು. ಬಿ.ಎನ್.ಪ್ರೇರಣಾ ಪ್ರಥಮ ಸ್ಥಾನ ಪಡೆದು ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾಳೆ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಕು. ತೇಜಸ್ವಿ ರಾಮಚಂದ್ರ ಹೆಗಡೆ ದ್ವಿತೀಯ ಸ್ಥಾನ ಪಡೆದು ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ.
ಈ ಇಬ್ಬರು ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಮ್.ಸಿ. ಸಮಿತಿ, ಪಾಲಕ ಪೋಷಕರು ಹಾಗೂ ಗ್ರಾಮಸ್ಥರು ಅಪಾರ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Kshetra Samachara
14/12/2024 06:15 pm