ಕೋಲಾರ : ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಎ ಮಂಜುನಾಥ್ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯದ ಸಂಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ಸಂಧಾನಕಾರರಾಗಿರುತ್ತಾರೆ . ಕಕ್ಷಿದಾರರ ನಡುವೆ ಮಾತುಕತೆ ನಡೆಸಿ ಅವರ ಮನವೊಲಿಸಿ ಯಾವುದೇ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಸಂದರ್ಭವನ್ನು ಸೃಷ್ಟಿ ಮಾಡಲಾಗುತ್ತಿದೆ . ಕಳೆದ ಆದಾಲತ್ ನಲ್ಲಿ 34470ಕ್ಕೂ ಹೆಚ್ಚಿನ ಪ್ರಕರಣಗಳನ್ನು ಸಂಧಾನದಲ್ಲಿ ತೀರ್ಮಾನ ಮಾಡಿ ಯಶಸ್ವಿ ಕಾಣಲಾಗಿದೆ. ಜಿಲ್ಲೆಯ ಕಕ್ಷಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು .
Kshetra Samachara
14/12/2024 07:05 pm