ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಕಣಿವೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮಾನ್ ಜಯಂತಿಯ ಅಂಗವಾಗಿ ಕಾರ್ತಿಕೋತ್ಸವವನ್ನು ಆಚರಿಸಲಾಯಿತು.
ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ದೀಪಗಳನ್ನು ಹಚ್ಚಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಪೂಜೆ ಪುನಸ್ಕಾರಗಳನ್ನು ನೆರವೇರಿಸಿದ್ದಾರೆ. ದೇವಸ್ಥಾನವನ್ನು ವಿಶೇಷವಾಗಿ ಬಗೆಯ ದೀಪಾಲಂಕಾರಗಳಿಂದ ಕಂಗೊಳಿಸುವ ರೀತಿಯಲ್ಲಿ ಅಲಂಕರಿಸಿದ್ದು ಭಕ್ತಾದಿಗಳು ದೀಪಗಳನ್ನು ಹಚ್ಚಿ ಕಾರ್ತಿಕೋತ್ಸವವನ್ನು ಸಂಭ್ರಮಿಸಿದ್ದಾರೆ.
ಈ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಟಿ. ಸೋಮಶೇಖರ್ ಅವರಿಗೆ ಶ್ರೀ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದ ಸಮಿತಿ ವತಿಯಿಂದ ಶ್ರೀ ರಾಮನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದ್ದಾರೆ.
Kshetra Samachara
14/12/2024 08:04 pm