ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಡಿ.16 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ - ಶಾಂಭವಿ ಅಶ್ವತಪೂರ್

ಬೆಳಗಾವಿ: ಡಿಸೆಂಬರ್ 16ರಂದು ಬೆಳಗಾವಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೃಹತ್ ಪ್ರತಿಭಟನೆಗೆ ಕರೆ ನೀಡಿಲಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಾಂಭವಿ ಅಶ್ವತಪೂರ್ ಅವರು ತಿಳಿಸಿದರು.‌

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಣಂತಿ ಮಹಿಳೆಯರು, ಶಿಶುಗಳ ಸಾವಿನ ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ.‌ ರಾಜ್ಯದಲ್ಲಿ ತಾಯಿ ಹಾಗೂ ಶಿಶುಗಳ ಮರಣದ ಸಂಖ್ಯೆ ಹೆಚ್ಚಾಗಿದೆ. ಶಕ್ತಿ ಯೋಜನೆಯಿಂದ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ.‌ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ.‌ ಈ ಎಲ್ಲ ವಿಚಾರಗಳನ್ನು ಖಂಡಿಸಿ ಸರ್ಕಾರದ ವಿರುದ್ಧ ಡಿ.16 ರಂದು ಪ್ರತಿಭಟನೆ ನಡೆಸಲಿದ್ದೇವೆ ಎಂದರು

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 75 ಬಾಣಂತಿಯರು ಹಾಗೂ 322 ನವಜಾತ ಶಿಶುಗಳು ಸಾವನ್ನಪ್ಪಿವೆ. ರಾಜ್ಯದಲ್ಲಿ ಬಾಣಂತಿ ಹಾಗೂ ಶಿಶುಗಳ ಮರಣ ಹೆಚ್ಚಾಗುತ್ತಿದೆ ಎಂಬುದಕ್ಕೆ ಬೆಳಗಾವಿ ಹಾಗೂ ಬಳ್ಳಾರಿಯಲ್ಲಿ ನಡೆದ ಘಟನೆಗಳು ಸಾಕ್ಷಿಯಾಗಿವೆ. ಬೆಳಗಾವಿ ಹಾಗೂ ಹಾವೇರಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗಿದೆ. ಈ ಸರ್ಕಾರದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಶಕ್ತಿ ಯೋಜನೆಯಿಂದ ಹಲವೆಡೆ ಸಾವು ನೋವುಗಳು ಸಂಭವಿಸಿವೆ ಎಂದರು.‌

Edited By : PublicNext Desk
Kshetra Samachara

Kshetra Samachara

14/12/2024 08:30 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ