ಬೆಂಗಳೂರು : ಈ ಹಿಂದೆ ಅನ್ವರ್ ಮಾಣಿಪ್ಪಾಡಿ ವಿಜಯೇಂದ್ರ ಕುರಿತು ಮಾಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಈ ಕುರಿತು ಟ್ವಿಟ್ ಮಾಡಿ ಸಿಬಿಐ ತೆನಿಖೆಗೆ ಆಗ್ರಹಿಸಿದರು. ಇದಕ್ಕೆ ಪ್ರತಿಟ್ವಿಟ್ ಮಾಡಿ ಸಿದ್ದರಾಮಯ್ಯ ಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯನವರು ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್'ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ದೆಹಲಿಯಿಂದ ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದಿರಿ, ಉಚ್ಛ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವುದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್ ಆಸ್ತಿಗಳ ಕುರಿತೇ ಹೊರತು ಬಿಜೆಪಿಯವರನ್ನು ಕುರಿತು ಅಲ್ಲ, ಕಾಂಗ್ರೆಸಿಗರ ವಿರುದ್ಧ ಇರುವ ಆರೋಪಕ್ಕೆ ಯಾರಾದರೂ ₹150 ಕೋಟಿ ರೂಪಾಯಿಗಳ ಆಮಿಷವನ್ನು ಒಡ್ಡಲು ಸಾಧ್ಯವೇ..? ಎಂಬ ಕನಿಷ್ಠ ವಿವೇಕವೂ ನಿಮಗಿಲ್ಲವಲ್ಲ..?
ತಳಬುಡ ವಿಲ್ಲದ ಆರೋಪವನ್ನು ನೀವು ಹಾಗೂ ನಿಮ್ಮ ಸಂಪುಟದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಭ್ರಮಿಸುತ್ತಿರುವ ಪರಿ ನಿಮ್ಮ ಬಾಲಿಶತನವನ್ನು ತೋರಿಸುತ್ತಿದೆಯೇ ಹೊರತು ನಿಮ್ಮ ರಾಜಕೀಯ ಜಾಣ್ಮೆಯನ್ನಲ್ಲ, ನಿಮಗೆ ಧೈರ್ಯವಿದ್ದರೆ, ಉಚ್ಛ ನ್ಯಾಯಾಲಯದಲ್ಲಿರುವ ನಿಮ್ಮ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆ ಕೋರಿದ ರಿಟ್ ಅರ್ಜಿಗೆ ಆಕ್ಷೇಪವೆತ್ತದೆ ಸಿಬಿಐ ತನಿಖೆ ನಡೆಯಲು ಅವಕಾಶ ಮಾಡಿಕೊಡಿ ನೋಡೋಣ..? ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು ಹಾಕಿದ್ದಾರೆ.
PublicNext
14/12/2024 09:59 pm