ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ 52.25 ಕೋಟಿ ರೂ. ಮನ್ನಾ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.

ಸುವರ್ಣಸೌಧದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯಿಸಿದೆ. ಹೀಗಾಗಿ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಸಮಸ್ಯೆ ನಿವಾರಣೆ ಆಗಿದೆ.

ಆರ್ಥಿಕವಾಗಿ ತೊಂದರೆಯಲ್ಲಿದ್ದ ಸರಕಾರಿ ಸ್ವಾಮ್ಯದ ಈ ಕಾರ್ಖಾನೆಯನ್ನು ಉಳಿಸಿ, ರೈತರು ಬೆಳೆದಿರುವ ಕಬ್ಬು ನುರಿಸುವ ಕಾರ್ಯ ಆರಂಭಿಸಲು ಸಾಧ್ಯವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಕಂಪನಿಗೆ ವಿದ್ಯುತ್ ಬಾಕಿ ಪಾವತಿಸಲು ನೆರವಾಗುವಂತೆ ಕಳೆದ ಜುಲೈ 5 ರಂದು ದಿನೇಶ್ ಗೂಳಿಗೌಡರು ಸಿಎಂ ಸಿದ್ದರಾಮಯ್ಯ ಅವರಿಗೆ ಖುದ್ದಾಗಿ ಮನವಿ ಸಲ್ಲಿಸಿದ್ದರು.

ತಮ್ಮ ಮನವಿಗೆ ಸ್ಪಂದಿಸಿ, ಮೈಶುಗರ್ ಕಾರ್ಖಾನೆಗೆ ನೆರವಾಗಿದ್ದಕ್ಕಾಗಿ ಗೂಳಿಗೌಡರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Edited By : Abhishek Kamoji
PublicNext

PublicNext

14/12/2024 10:50 pm

Cinque Terre

6.48 K

Cinque Terre

1

ಸಂಬಂಧಿತ ಸುದ್ದಿ