ಹುಬ್ಬಳ್ಳಿ: ಸೌದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ, ಹುಣ್ಣಿಮೆಯ ಅಂಗವಾಗಿ, ಇಂದಿನಿಂದ ಬರುವ ಅಮವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದ್ದಾರೆ.
ಕಳೆದ ಶೀಗಿ ಹುಣ್ಣಿಮೆ, ದೀಪಾವಳಿ ಅಮವಾಸ್ಯೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸೌದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಪಿಸಲಾಗಿದ್ದ, ವಿಶೇಷ ನೇರ ಬಸ್ ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಈ ವಿಶೇಷ ನೇರ ಬಸ್ಸುಗಳಿಂದ ಸಾವಿರಾರು ಭಕ್ತಾದಿಗಳಿಗೆ ಬಹಳಷ್ಟು ಅನುಕೂಲವಾಗಿದೆ. ಬರುವ ಹುಣ್ಣಿಮೆಯ ದಿನ, ಮಂಗಳವಾರ ಹಾಗೂ ಶುಕ್ರವಾರದಂದು ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ನೇರ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಈ ವಿಶೇಷ ಬಸ್ಸುಗಳು ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ. ಜನರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಯಲ್ಲಮ್ಮನ ಗುಡ್ಡಕ್ಕೆ ತೆರಳುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/12/2024 07:59 am