ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾರತ್ ಹಳ್ಳಿ ಪೊಲೀಸರು ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಹಾಗೂ ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ.
ಹರಿಯಾಣದ ಗುರುಗ್ರಾಮದಲ್ಲಿ ನಿಕಿತಾ ಅವರನ್ನು ಬಂಧಿಸಿದರೆ, ಉಳಿದ ಇಬ್ಬರು ಆರೋಪಿಗಳನ್ನು ಅಲಹಾಬಾದ್‌ನ ಗುರುಗಾವ್‌ನಲ್ಲಿ ಬಂಧಿಸಿದ್ದಾರೆ. ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
PublicNext
15/12/2024 09:04 am