ಶಿವಮೊಗ್ಗ: ವಾಸ್ತವಿಕ ಹಾಗೂ ವಸ್ತುನಿಷ್ಠ ದತ್ತಾಂಶವಿಲ್ಲದೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬಾರದೆಂದು ಆಗ್ರಹಿಸಿ ಡಿ. 17ರಂದು ಬೆಳಗಾವಿ ಸುವರ್ಣಸೌಧ ಚಲೋ ಪ್ರತಿಭಟನೆ ನಡೆಸಲಾಗುವುದು ಎಂದು ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಡಿ.ಆರ್. ತಿಳಿಸಿದ್ದಾರೆ.
ಸರ್ಕಾರ ನಿಖರವಾದ ದತ್ತಾಂಶ ಪಡೆಯದೇ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೊರಟಿದೆ. ದತ್ತಾಂಶವನ್ನು ಅಧಿಕೃತವಾಗಿ ಘೋಷಿಸಬೇಕೆಂದು ಒತ್ತಾಯಿಸಿದ ಅವರು, ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಒಳಗಾಗಿ ಒಳ ಮೀಸಲಾತಿಯನ್ನು ಜಾರಿ ಮಾಡಬಾರದು. ಈ ನಿಟ್ಟಿನಲ್ಲಿ ಡಿ. 17ರಂದು ಬೆಳಗಾವಿ ಚಲೋಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸಂಘ- ಸಂಸ್ಥೆಗಳು ಒಟ್ಟಿಗೆ ಸೇರಿ ಸುಮಾರು 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
PublicNext
15/12/2024 10:25 am