ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ರೈತ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ: ಸುಳಗಾ ಗ್ರಾಮದಲ್ಲಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ರೈತ ಸಮುದಾಯ ಭವನ ನಿರ್ಮಾಣಕ್ಕೆ ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು‌. ಸಮುದಾಯ ಭವನ ನಿರ್ಮಾಣದಿಂದ ರೈತರಿಗೆ, ಮಹಿಳಾ ಮಂಡಳಿಗೆ ಸಭೆ ಮಾಡಲು ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಕಾಮಗಾರಿ ಸ್ಥಳೀಯರ ಸಲಹೆಯಂತೆ ನಡೆಯಬೇಕು. ಅತ್ಯಂತ ಸುಂದರ ಭವನ ನಿರ್ಮಾಣವಾಗಬೇಕು. ಇದು ಬೇರೆ ಕಡೆ ಮಾಡುವುದಕ್ಕೆ ಮಾದರಿಯಾಗಬೇಕು ಎಂದು ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರು.

ಸುಳಗಾದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ವೇದಿಕೆಗೆ ಬಂದ ವ್ಯಕ್ತಿಯೋರ್ವ ಸಚಿವರ ನೆರವು ನೆನಪಿಸಿಕೊಂಡು, ನಿಮ್ಮ ಋಣವನ್ನು ತೀರಿಸಲು ನನ್ನಿಂದ ಸಾಧ್ಯವಿಲ್ಲ ಎನ್ನುತ್ತ ಗಳಗಳನೆ ಅತ್ತುಬಿಟ್ಟ. ಬೊಮ್ಮಣ್ಣ ಪೋಟೆ ಎನ್ನುವ ವ್ಯಕ್ತಿ ವೇದಿಕೆಗೆ ಬಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕೆಲಸಗಳು ಎಲ್ಲರಿಗೂ ಆದರ್ಶ. ನನ್ನ ಸಹೋದರಿಗೆ ಹೃದಯದ ಕಾಯಿಲೆ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಿಸಲು ನೆರವಾದರು. ನಂತರ ಸಹೋದರಿಯ ಮಗಳಿಗೆ ಉತ್ತಮವಾಗ ಉದ್ಯೋಗ ಒದಗಿಸಿಕೊಟ್ಟು ಜೀವನಕ್ಕೆ ದಾರಿ ಮಾಡಿಕೊಟ್ಟರು. ನಮ್ಮ ಎಲ್ಲ ಕಷ್ಟದ ಸಂದರ್ಭದಲ್ಲೂ ಸಚಿವರು ನೆರವಿಗೆ ನಿಂತರು. ಇದು ನನಗೊಬ್ಬನಿಗೇ ಅಲ್ಲ, ಇಡೀ ಕ್ಷೇತ್ರದ ಜನರಿಗೆ ಅವರು ಕಷ್ಟದ ಸಂದರ್ಭದಲ್ಲಿ ನೆರವಾಗುತ್ತಿದ್ದಾರೆ. ಅವರ ಋಣವನ್ನು ಎಂದಿಗೂ ನನ್ನಿಂದ ತೀರಿಸಲು ಸಾಧ್ಯವಿಲ್ಲ. ಜೀವನ ಪರ್ಯಂತ ನಾನು ನಿಮ್ಮ ಸೇವಕನಾಗಿರಲು ಸಿದ್ಧ ಎನ್ನುತ್ತ ಜೋರಾಗಿ ಅತ್ತುಬಿಟ್ಟ.

ಸಚಿವ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್‌ ಹೆಬ್ಬಾಳಕರ್, ಮುಖಂಡರಾದ ಬಾಬಣ್ಣ ನರೋಟಿ, ಸಂಜಯ್‌ ಪಾಟೀಲ್, ಮಾರುತಿ ಪಾಟೀಲ್, ಮಹದೇವ್ ಕಂಗ್ರಾಳ್ಕರ್, ಬಾವುರಾವ್ ಗಡ್ಕರಿ ಸೇರಿದಂತೆ ಸುಳಗಾ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

15/12/2024 10:59 am

Cinque Terre

4.97 K

Cinque Terre

0

ಸಂಬಂಧಿತ ಸುದ್ದಿ