ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾಗಿರುವ ಘಟನೆ ಎಡಪದವು ಗ್ರಾಮ ಪಂಚಾಯತ್ ಬಳಿ ನಡೆದಿದೆ.

ಎಡಪದವು ನಿವಾಸಿ ಅನುಸೂಯ ಕಾಜವ ಎಂಬವರು ಎಡಪದವು ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು‌. ಈ ವೇಳೆ ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದವರಿಬ್ಬರು ಅನುಸೂಯರಲ್ಲಿ ವಿಳಾಸವೊಂದನ್ನು ಕೇಳುವ ನೆಪದಲ್ಲಿ ಅವರ ಕತ್ತಿನಲ್ಲಿದ್ದ ಸುಮಾರು 2 ಪವನ್‌ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.

ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Edited By : Vijay Kumar
PublicNext

PublicNext

15/12/2024 11:19 am

Cinque Terre

7.55 K

Cinque Terre

0