ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ: ಮನೆಯ ಬೀಗ ಮುರಿದು ಕಪಾಟಿನಲ್ಲಿದ್ದ ಹಣ ಕದ್ದೊಯ್ದ ಕಳ್ಳರು

ಯಲ್ಲಾಪುರ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಬಾಗಿಲಿನ ಬೀಗ ಮುರಿದು, ಮನೆಯ ಒಳಗಿದ್ದ ಕಪಾಟಿನಲ್ಲಿ ಇಟ್ಟಿದ್ದ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಯಲ್ಲಾಪುರ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ರವೀಂದ್ರ ನಗರದ, ಹೊಟೇಲ್ ಉದ್ಯಮ ನಡೆಸುತ್ತಿರುವ ಮಧುಕೇಶ್ವರ ನರಸಿಂಹ ಭಟ್ಟ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಜನರು ಮನೆಗೆ ಬೀಗ ಹಾಕಿ ಹೋಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ ರೂಂನಲ್ಲಿದ್ದ ಕಪಾಟನ್ನು ಒಡೆದು, ಕಪಾಟಿನ ಒಳಗೆ ಇಟ್ಟಿದ್ದ 50 ಸಾವಿರ ರೂ ಹಣವನ್ನು ಕದ್ದುಕೊಂಡು ಹೋಗಿದ್ದಾರೆ. ಈ ಕುರಿತು ಮಧುಕೇಶ್ವರ ಭಟ್ಟ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಕಳ್ಳತನವಾದ ಹಣವನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

15/12/2024 01:28 pm

Cinque Terre

1.5 K

Cinque Terre

0

ಸಂಬಂಧಿತ ಸುದ್ದಿ