ದಾವಣಗೆರೆ : ದಾವಣಗೆರೆಯಲ್ಲಿಂದು ವಿಜಯೇಂದ್ರ ಶಕ್ತಿ ಪ್ರದರ್ಶನ ಹಿನ್ನೆಲೆ ಬಿವೈವಿ ಟಿಂನಿಂದ ಮಹತ್ವದ ಸಭೆ ನಡೆಯಲಿದ್ದು, ಸಭೆಗೂ ಮುನ್ನ ನಗರದ ದುರ್ಗಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮಾಜಿ ಸಚಿವರು, ಶಾಸಕರು ದುರ್ಗಾಂಬಿಕಾ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು.
ದೇವಸ್ಥಾನದ ಆವರಣದಲ್ಲಿ ಪಟಾಕಿ ಸಿಡಿಸಿ ಬಿಜೆಪಿ ನಾಯಕರನ್ನು ಕಾರ್ಯಕರ್ತರು ಸ್ವಾಗತಿಸಿದರು.
ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಮತ್ತು ಎಸ್ ಎ ರವೀಂದ್ರನಾಥ ನೇತೃತ್ವದಲ್ಲಿ ಸಭೆ
ದಾವಣಗೆರೆ ಖಾಸಗಿ ಹೊಟೇಲ್ ನಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ 40ಕ್ಕೂ ಅಧಿಕ ನಾಯಕರು ಭಾಗಿಯಾಗಿದ್ದಾರೆ.
ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ರೇಣುಕಾಚಾರ್ಯ ಸೇರಿದಂತೆ 20ಕ್ಕೂ ಅಧಿಕ ಬಿಜೆಪಿ ನಾಯಕರು ದುರ್ಗಾಂಬಿಕದೇವಿ ದರ್ಶನ ಪಡೆದಿದ್ದಾರೆ.
PublicNext
15/12/2024 01:44 pm