ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ಜೀಪ್ ಚಾಲಕನ ಧಾವಾಂತಕ್ಕೆ ಸ್ಕೂಟರ್ ಸವಾರ ಬಲಿ- ಸಹಸವಾರೆ ಗಂಭೀರ

ಉಳ್ಳಾಲ: ತೊಕ್ಕೊಟ್ಟು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಜೀಪೊಂದು ಎರ್ರಾಬರ್ರಿ ಸಂಚರಿಸಿ ಸ್ಕೂಟರ್‌ಗೆ ಢಿಕ್ಕಿಯಾದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟು ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ನ ಹೈ ಸ್ಪಿರಿಟ್ಸ್ ವೈನ್ ಶಾಪ್ ಮುಂಭಾಗ ನಡೆದಿದೆ.

ಉಳ್ಳಾಲ, ಎಲಿಯಾರ್ ಪದವು ಸಂಪಿಗೆದಡಿ ನಿವಾಸಿ ಅರುಣ್ ಪೂಜಾರಿ(43) ಮೃತಪಟ್ಟವರು.

ಅರುಣ್ ಪೂಜಾರಿ ತೊಕ್ಕೊಟ್ಟು ಕಾಪಿಕಾಡುವಿನ ವೈನ್ & ಡೈನ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ವೈಟರ್ ಕೆಲಸ ಮಾಡುತ್ತಿದ್ದರು. ಶನಿವಾರ ತಡರಾತ್ರಿ ಅರುಣ್ ಅವರು ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಜಿಪ್ಪಿ ಜೀಪ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಅರುಣ್‌ರೊಂದಿಗೆ ಸ್ಕೂಟರ್‌ನಲ್ಲಿ ವೈನ್ & ಡೈನ್‌ನ ಸ್ವಚ್ಚತಾ ಸಿಬ್ಬಂದಿ ಹೇಮಾವತಿ ಎಂಬ ಮಹಿಳೆ ಇದ್ದು, ಘಟನೆಯಲ್ಲಿ ಅವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೀಪ್ ಚಾಲಕ ಮದ್ಯ ಸೇವಿಸಿ ಜೀಪ್ ಚಲಾಯಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಜೀಪ್ ಚಾಲಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಅರುಣ್ ಅವರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Edited By : Abhishek Kamoji
Kshetra Samachara

Kshetra Samachara

15/12/2024 02:51 pm

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ