ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸನ್ಯಾಸ ದೀಕ್ಷೆ ಸ್ವೀಕರಿಸಿದ ಕೆಎಎಸ್ ಅಧಿಕಾರಿ - ಒಕ್ಕಲಿಗ ಮಠದ ಉತ್ತರಾಧಿಕಾರಿಯಾಗಿ ನೇಮಕ

ಬೆಂಗಳೂರು: ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ದೀಕ್ಷೆ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದಲ್ಲಿ ನೂರಾರು ಸ್ವಾಮೀಜಿಗಳ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ಕಾರ್ಯಕ್ರಮ ನೆರವೇರಿತು. ಡಾ.ಹೆಚ್.ಎಲ್.ನಾಗರಾಜ್, ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಉತ್ತರಾಧಿಕಾರಿಯಾಗಿ ಪೀಠಾಧಿಪತಿಗಳಾಗಿ ದೀಕ್ಷೆ ಸ್ವೀಕರಿಸಿದ್ದಾರೆ.

ಡಾ.ನಾಗರಾಜ್ ಸನ್ಯಾಸತ್ವ ಸ್ವೀಕರಿಸಿರುವ ಹಿನ್ನೆಲೆ ನಿಶ್ಚಲಾನಂದನಾಥ ಸ್ವಾಮೀಜಿಯಾಗಿ ಹೆಸರು ಬದಲಿಸಲಾಗಿದೆ. ಇದೇ ವೇಳೆ ಮಾತನಾಡಿದ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಶ್ರೀಗಳು, ಎರಡು ಮಠಗಳ ನಡುವೆ ಯಾವುದೇ ಸಮಸ್ಯೆಗಳಿಲ್ಲ. ಒಂದೇ ಗುರು, ಒಂದೇ ಸಮುದಾಯ, ಒಂದೇ ತಾಯಿ ಎಂದು ಪೂಜ್ಯರು ಹೇಳಿದ್ದಾರೆ.

Edited By : Abhishek Kamoji
PublicNext

PublicNext

15/12/2024 03:37 pm

Cinque Terre

13.02 K

Cinque Terre

0

ಸಂಬಂಧಿತ ಸುದ್ದಿ