ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದಲ್ಲಿ ವಿಜೃಂಭಣೆಯ ಶ್ರೀದೇವರ ಅನುಜ್ಞಾ ಕಲಶ

ಮುಲ್ಕಿ: ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದೇವರ ಅನುಜ್ಞಾ ಕಲಶ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಹಯಗ್ರೀವ ಪಡ್ಡಿಲ್ಲಾಯ, ರಾಜಾರಾಮ್ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಶ್ರೀ ದೇವರ ಅನುಜ್ಞಾ ಕಲಶಾಭಿಷೇಕ , ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಎಮ್ ಎಚ್ ಅರವಿಂದ ಪೂಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವಿಕುಮಾರ್, ಶಶೀoದ್ರ ಸಾಲ್ಯಾನ್, ರಾಘವೇಂದ್ರ ರಾವ್, ನೂತನ್ ಶೆಟ್ಟಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ನಿವೃತ್ತ ಉಪನ್ಯಾಸಕ ವೈ ಎನ್ ಸಾಲ್ಯಾನ್, ಸುರೇಶ್ ರಾವ್, ಪುರಂದರ ಸಾಲ್ಯಾನ್,ಕೃಷ್ಣ ಶೆಟ್ಟಿ, ಪ್ರವೀಣ್ ಕೋಟ್ಯಾನ್ ಧರ್ಮಸ್ಥಾನ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/12/2024 03:43 pm

Cinque Terre

212

Cinque Terre

0

ಸಂಬಂಧಿತ ಸುದ್ದಿ