ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಜನ ಜಾಗೃತಿ ಬೀದಿ ನಾಟಕ

ಮೊಳಕಾಲ್ಮುರು: ಬಿಜಿಕೆರೆ ಗ್ರಾಮದಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ ನಡೆಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಿತ್ರದುರ್ಗ ಮತ್ತು ವಿವಿಧ ಸಂಘ ಸಂಸ್ಥೆ ಯೋಜನೆಯಡಿ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ಚಾಲನೆ ನೀಡಿದ ಬಿಜಿಕೆರೆ ಗ್ರಾಪಂ ಅಧ್ಯಕ್ಷ ಎಸ್ ಜಯಣ್ಣ ಮಾತನಾಡಿ,ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪಿಸುವಂತಹ ಕೆಲಸ ಸರ್ಕಾರ ಮಾಡುತ್ತಿದೆ, ಈಗಾಗಲೇ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮಹಿಳೆಯರಿಗೆ 2000 ನೀಡಲಾಗುತ್ತಿದೆ.

ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡ ಪರಿಶಿಷ್ಟ ವರ್ಗದವರ ಆರ್ಥಿಕ ಸಬಲತೆಗಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

15/12/2024 06:43 pm

Cinque Terre

480

Cinque Terre

0

ಸಂಬಂಧಿತ ಸುದ್ದಿ