ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

HDKಗೆ ಮತ್ತೆ ಮುಖಭಂಗ : ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಡಿಕೆಶಿ ಬಣದ ಕೆಂಚಪ್ಪಗೌಡ ಆಯ್ಕೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಸೋಲಿನ ನಂತರ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಮತ್ತೆ ಮುಗಭಂಗವಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಕುಮಾರಸ್ವಾಮಿ ಬಣಕ್ಕೆ ಹಿನ್ನಡೆಯಾಗಿದ್ದು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ 14 ಮತಗಳು ಬಂದಿದ್ದು ಡಿಕೆ ಶಿವಕುಮಾರ್​​ ಬಣದ ಕೆಂಚಪ್ಪ ಗೌಡ 21 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಎಲ್​ ಶ್ರೀನಿವಾಸ್​​ ಮತ್ತು ಡಾ. ರೇಣುಕಾಪ್ರಸಾದ್​ ಕೆ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ. ಆರ್​​ ಮತ್ತು ಖಜಾಂಚಿಯಾಗಿ ಎನ್​​.ಬಾಲಕೃಷ್ಣ ಆಯ್ಕೆ ಆಗಿದ್ದಾರೆ.

Edited By : Abhishek Kamoji
PublicNext

PublicNext

15/12/2024 10:26 pm

Cinque Terre

18.76 K

Cinque Terre

1

ಸಂಬಂಧಿತ ಸುದ್ದಿ