ಬೇಲೂರು : ಕಾಡಾನೆ ದಾಳಿಯಿಂದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ, ಸಿರಗುರ ಗ್ರಾಮದಲ್ಲಿ ನಡೆದಿದೆ. ಜಯಂತಿ (47), ಶಬಾನ (45) ಕಾಡಾನೆ ದಾಳಿಯಿಂದ ಗಾಯಗೊಂಡ ಮಹಿಳೆಯರು.
ಗ್ರಾಮದಲ್ಲಿ ಕೆ.ಇ.ಎಂ.ಎಸ್. ಕಾಫಿ ತೋಟದಲ್ಲಿ ಕಾಫಿ ಕೊಯ್ಲಿಗೆ ತೆರಳಿದ್ದ ಕೂಲಿ ಕಾರ್ಮಿಕರು,ಕಾಫಿ ಕೊಯ್ಲು ಮಾಡುತ್ತಿದ್ದ ವೇಳೆ ಏಕಾಏಕಿ ಒಂಟಿ ಕಾಡಾನೆಯೊಂದು ದಾಳಿ ಮಾಡಿದೆ, ತೀವ್ರವಾಗಿ ಗಾಯಗೊಂಡ ಇಬ್ಬರು ಮಹಿಳೆಯರಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Kshetra Samachara
16/12/2024 01:00 pm