ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಗನವಾಡಿ ಕೇಂದ್ರವನ್ನು ಬಂದ್ ಮಾಡಿ ಏಳು ದಿನ ಕಳೆದರೂ ಬಾರದ ಅಧಿಕಾರಿಗಳು

ಶಿರಹಟ್ಟಿ : ಖಾನಾಪುರ ಗ್ರಾಮದ ಅಂಗನವಾಡಿ ಕೇಂದ್ರ 41 ರಲ್ಲಿ ಅಂಗನವಾಡಿ ಕಾರ್ಯಕರ್ತೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಮಲತಾಯಿ ಧೋರಣೆಯನ್ನು ಖಂಡಿಸಿ ಸ್ಥಳೀಯರು ಅಂಗನವಾಡಿ ಕೇಂದ್ರವನ್ನು ಬಂದ್ ಏಳು ದಿನ ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಸ್ಥಳಕ್ಕೆ ಆಗಮಿಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ ಒಂದರಲ್ಲಿ ಬರುವ ಖಾನಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಿರಹಟ್ಟಿ ಪಟ್ಟಣದ ಅಂಗನವಾಡಿ ಕೇಂದ್ರದ ಸಹಾಯಕಿಗೆ, ಪದೋನ್ನತಿ ಆಧಾರದ ಮೇಲೆ ಪ್ರಮೋಶನ್ ನೀಡಿ ಖಾನಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ನೇಮಕಾತಿ ಮಾಡಿದಾಗ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ನಮ್ಮ ಗ್ರಾಮದಲ್ಲಿ ಸಾಕಷ್ಟು ಪ್ರತಿಭಾವಂತ ಮಹಿಳೆಯರು ಇದ್ದಾರೆ ನಮ್ಮ ಅಂಗನವಾಡಿ ಕೇಂದ್ರಕ್ಕೆ ನಮ್ಮ ಊರಿನವರನ್ನೆ ನೇಮಕ ಮಾಡಬೇಕು ಎಂದು ಸ್ಥಳೀಯರು ಅಂಗನವಾಡಿ ಕೇಂದ್ರವನ್ನು ಬಂದ್ ಮಾಡಿದ್ದಾರೆ.

ಒಟ್ಟಿನಲ್ಲಿ ಅಂಗನವಾಡಿ ಕೇಂದ್ರವು ಬಂದ್ ಮಾಡಿ ಏಳು ದಿನ ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಸ್ಥಳಕ್ಕೆ ಆಗಮಿಸದೆ ಇರುವುದು ವಿಷಾದಕರ ಸಂಗತಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಮುಕ್ತಿ ನೀಡುತ್ತಾರೆ ಎಂದು ಕಾದು ನೋಡಬೇಕಿದೆ.

-ಗೌರೀಶ ನಾಗಶೆಟ್ಟಿ ಪಬ್ಲಿಕ್ ನೆಕ್ಸ್ಟ್ ಶಿರಹಟ್ಟಿ

Edited By : Shivu K
PublicNext

PublicNext

16/12/2024 01:04 pm

Cinque Terre

19.54 K

Cinque Terre

0

ಸಂಬಂಧಿತ ಸುದ್ದಿ