ಗದಗ.
ರೋಣ ಮತಕ್ಷೇತ್ರದಲ್ಲಿ ಶಾಸಕ ಜಿ.ಎಸ್.ಪಾಟೀಲ್ ನೇತೃತ್ವದಲ್ಲಿ197 ಕೋಟಿ ರೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ರೋಣ ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ವತಿಯಿಂದ ರೋಣ ವಿಧಾನಸಭೆ ಕ್ಷೇತ್ರದಲ್ಲಿ ವಿವಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಶಾಸಕ ಜಿ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್ ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಒತ್ತಾಯಿಸಿದ್ದಾರೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು. ಜಿ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಮುಂದೆ ನೋಡೋಣ ಎಂದು ಸಿಎಂ ಭರವಸೆ ನೀಡಿದರು.
Kshetra Samachara
16/12/2024 01:55 pm