ಕೋಲಾರ - ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಅವರದ್ದೇ ಪಕ್ಷದ ಮುಖಂಡ ಅನ್ವರ್ ಮಾಣಿಪ್ಪಾಡಿ ₹ 150 ಕೋಟಿ ಆಮಿಷದ ಆರೋಪ ಮಾಡಿದ್ದು, ಸಿಬಿಐ ಹಾಗೂ ಇ.ಡಿ ಏನು ಮಾಡುತ್ತಿವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ವಕ್ಫ್ ವಿಚಾರ ಮಾತನಾಡದಂತೆ ಒತ್ತಡ ಹೇರಿ ಅವರ ಮಗ ವಿಜಯೇಂದ್ರ ₹ 150 ಕೋಟಿ ಆಮಿಷವೊಡ್ಡಿದ್ದರು ಎಂಬುದಾಗಿ ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ. ಇದೇ ವಿಚಾರವನ್ನು ಈ ಹಿಂದೆ ಆ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೇರೆ ಬೇರೆ ಸಂದರ್ಭದಲ್ಲಿ ಪರೋಕ್ಷವಾಗಿ ಹೇಳಿದ್ದಾರೆ' ಎಂದರು. ಸುಳ್ಳು ಆರೋಪಿಗಳಿಗೆಲ್ಲಾ ಇ.ಡಿ ಹಾಗೂ ಸಿಬಿಐ ಕಾಂಗ್ರೆಸ್ ಮುಖಂಡರಿಗೆ ನೋಟಿಸ್ ನೋಡುತ್ತಿವೆ. ಬಿಜೆಪಿ ಮುಖಂಡರ ಮೇಲೆ ಇಷ್ಟೆಲ್ಲಾ ಆರೋಪ ಇರುವಾಗ ತನಿಖಾ ಸಂಸ್ಥೆಗಳು ಸುಮ್ಮನೇ ಏಕೆ ಕುಳಿತಿವೆ? ಸಿಬಿಐ, ಇ.ಡಿ ಇರುವುದು ಕಾಂಗ್ರೆಸ್ ಮುಖಂಡರನ್ನು ಟಾರ್ಗೆಟ್ ಮಾಡಲು ಮಾತ್ರವೇ? ಈ ಸಂಸ್ಥೆಗಳಿಗೆ ಸಾಂವಿಧಾನಿಕ ಜವಾಬ್ದಾರಿ ಇದ್ದರೆ ತನಿಖೆ ಮಾಡಬೇಕು. ಇದೇ ವಿಚಾರವನ್ನು ಮುಖ್ಯಮಂತ್ರಿ ಕೂಡ ಹೇಳಿದ್ದಾರೆ' ಎಂದು ಹೇಳಿದರು.
Kshetra Samachara
16/12/2024 02:09 pm