ಹಾಸನ: ವಕ್ಫ್ ಕಾನೂನು ರದ್ದು ಪಡಿಸಲು ಆಗ್ರಹಿಸಿ ಇಂದು ಅರಸೀಕೆರೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಹಾಗೂ ಮಠಾದೀಶರ ಸಮ್ಮುಖದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಾಠಾದೀಶರು ಭಾಗವಹಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ವಕ್ಫ್ ಕಾನೂನು ರದ್ದು ಪಡಿಸುವಂತೆ ಆಗ್ರಹಿಸಿ ಗೋಷಣೆ ಕೂಗಿದರು ಬಳಿಕ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ವಕ್ಫ್ ಕಾನೂನು ಹಿಂದೂಗಳ ವಿರೋಧಿ ನೀತಿ ಅನುಸರಿಸುತ್ತಿದೆ, ಹಿಂದೂಗಳ ಆಸ್ತಿ ಮಠಮಾನ್ಯಗಳು, ವಕ್ಫ್ ಆಸ್ತಿಯಾಗಿ ಪರಿವರ್ತನೆ ಮಾಡುವ ಮೂಲಕ ಹಿಂದೂಗಳಿಗೆ ಮಾರಕ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ವಕ್ಫ್ ಕಾನೂನನ್ನು ರದ್ದು ಪಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
Kshetra Samachara
16/12/2024 03:20 pm