ಹಾಸನ :ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ವಾಸವಿ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಾಂಡು ಮಾತನಾಡಿ, ಹಾಸನ ಜಿಲ್ಲೆಯು ವಿಭಿನ್ನವಾದ ಸಾಂಸ್ಕೃತಿಕ ನೆಲೆಗಟ್ಟನ್ನು ಹೊಂದಿದ್ದು ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲೂ ಅಪಾರ ಸಾಂಸ್ಕೃತಿಕ ಪ್ರತಿಭೆಗಳು ಹೋರ ಹೊಮ್ಮಿವೆ, ಶೈಕ್ಷಣಿಕ ಹಂತದಲ್ಲೇ ಮಕ್ಕಳು ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡರೆ ಸ್ಥಳೀಯ ಸಾಂಸ್ಕೃತಿ ಉಳಿಸಲು ಸಾಧ್ಯ ಎಂದರು.
ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ ಮಕ್ಕಳು ಜಿಲ್ಲಾ ಮಟ್ಟದಲ್ಲೂ ಗೆಲುವು ಸಾಧಿಸಿ ರಾಜ್ಯ ಮಟ್ಟವನ್ನು ಪ್ರತಿನಿಧಿಸುವ ಮೂಲಕ ಹಾಸನ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಬೇಕು, ಶಾಲಾ ಮಕ್ಕಳಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಎಂಬ ತಾರತಮ್ಯ ಬೇಡ ಯಾವುದೇ ಶಾಲೆಯ ಮಕ್ಕಳಾದರು ಹಾಸನ ಜಿಲ್ಲೆಯ ಮಕ್ಕಳು ಎಂಬುದೇ ಹೆಮ್ಮೆ ಎಂದರು.
Kshetra Samachara
16/12/2024 03:21 pm