ಹೊಳೆನರಸೀಪುರ : ವಿದ್ಯುತ್ ಸ್ಪರ್ಶದಿಂದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ಹೊಳೆನರಸೀಪುರ ತಾಲೂಕಿನ ಮಳಲಿ ಗ್ರಾಮದ ಕರಿಯಮ್ಮನ ದೇವಸ್ಥಾನದ ಬಳಿ ಇರುವ ಜಮೀನಿನಲ್ಲಿ ನಡೆದಿದೆ.
ಶಾಂತಿಗ್ರಾಮ ಹೋಬಳಿಯ ಬೆಳ್ಳಿಕೊಪ್ಪಲು ಗ್ರಾಮದ ಚಿಕ್ಕೆಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಕಬ್ಬು ಬೆಂಕಿಗಾಹುತಿಯಾಗಿದ್ದು, ಕಬ್ಬಿನ ಗದ್ದೆಗೆ ಬೆಂಕಿ ಬಿದ್ದುದನ್ನು ಗಮನಿಸಿದ ಜಮೀನಿನ ಮಾಲೀಕರು ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿ ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
PublicNext
16/12/2024 04:54 pm