ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ನರೇಗಾ ಕೂಲಿಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಧರಣಿ

ಬೀದರ್: ನರೇಗಾ ಕೂಲಿಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಹುಮನಾಬಾದ್ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಕೂಲಿ ಕಾರ್ಮಿಕರು ಧರಣಿ ನಡೆಸಿರುವ ಘಟನೆ ಸೋಮವಾರ ನಡೆದಿದೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.

ನಮೂನೆ-6 ರ ಅಡಿಯಲ್ಲಿ ಕೆಲಸದ ಬೇಡಿಕೆ ಸಲ್ಲಿಸಿದ ಗ್ರಾಮ ಪಂಚಾಯತ್ ಗಳಲ್ಲಿ ಕಡ್ಡಾಯವಾಗಿ ಸ್ವಿಕೃತಿ ನೀಡಬೇಕು. ನಿಯಮದಂತೆ ರೆಜಿಸ್ಟರ್-3ರಲ್ಲಿ ಕೆಲಸದ ಬೇಡಿಕೆ, ಹಂಚಿಕೆ ಮತ್ತು ಕೂಲಿ ಪಾವತಿಸಿದ ವಿವರ ಹಾಗೂ ಕೆಲಸದ ಬೇಡಿಕೆಯ ಅವಧಿ (ದಿನಗಳು) ಕಡ್ಡಾಯವಾಗಿ ನಮೂದಿಸಿ ಅದನ್ನು ಪರಿಶೀಲಿಸಬೇಕು. ಕೆಲಸದ ಸಮಯದಲ್ಲಿ ಕಡ್ಡಾಯವಾಗಿ ತಾಂತ್ರಿಕ ಸಹಾಯಕರು ಅಥವಾ BFTಗಳು ಸ್ಥಳಕ್ಕೆ ಭೇಟಿ ನೀಡಿ ಅಳತೆ ಮಾಡಿ ಕೂಲಿ ಪಾವತಿಸಬೇಕು. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ಸೀತಾಳಗೇರಾ ಗ್ರಾಮ್ ಪಂಚಾಯತ್ ವ್ಯಾಪ್ತಿಯಲ್ಲಿ 112 ಜನ, ನಿಂಬೂರ್ ಗ್ರಾಮದ 48 ಜನ, ಮರಕಲ್ ಗ್ರಾಮದ 79, ಸಿಂಧನಕೇರಾ ಗ್ರಾಮ ಪಂಚಾಯಿತಿಯ ಹಣಕುಣಿ ಗ್ರಾಮದ 30 ಜನ ಕೂಲಿಕಾರ್ಮಿಕರು ನರೇಗಾ ಯೋಜನೆಯಡಿ ಕೂಲಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಇಲ್ಲಿವರೆಗೆ ಕೆಲಸ ನೀಡದೆ ನಿರ್ಲಕ್ಷವಹಿಸಿದ್ದು, ಕೆಲವು ಅಧಿಕಾರಿಗಳು ಅರ್ಜಿ ಸ್ವೀಕರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ, 15 ದಿವಸದಲ್ಲಿ ನರೇಗಾ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಎನ್.ಎಂ.ಆರ್ ನೀಡಲಾಗುವುದು ಎಂದು ಭರವಸೆ ನೀಡಿದರು. ಮಹಿಳೆಯರು ಇಂದೇ ಎನ್.ಎಂ.ಆರ್ ನೀಡುವಂತೆ ಒತ್ತಾಯಿಸಿ, ತಹಶೀಲ್ದಾರ್ ಕಾರ್ಯಾಲಯ ಮುಂದೆಯೇ ಅಡುಗೆ ಮಾಡಿ ಊಟ ಮಾಡುವ ಮೂಲಕ ನಿರಂತರ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುವವರೆಗೂ ಹೋರಾಟ ನಡೆಸುತ್ತೇವೆ. ತಕ್ಷಣವೇ ಕಾರ್ಮಿಕರಿಗೆ ನಿರುದ್ಯೋಗ ಭತ್ತೆ ಸಿಗುವಂತಾಗಬೇಕು, ಬೇಡಿಕೆ ಸಲ್ಲಿಸಿದ ಎಲ್ಲಾ ಕಾರ್ಮಿಕರ ಬೇಡಿಕೆ ಪೂರೈಸಬೇಕು. ಕಾರ್ಮಿಕರನ್ನು ಕಡೆಗಣಿಸುತ್ತಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೂ ಈ ಧರಣಿ ನಿರಂತರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿ ಧರಣಿ ಮುಂದುವರೆಸಿದ್ದಾರೆ ಎನ್ನಲಾಗಿದೆ.

ಪ್ರತಿಭಟನೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯಕರ್ತೆ ಸಪ್ನ ದೀಪಾ, ಗೀತಾ ಹುಲಸೂರ್, ರೇಷ್ಮಾ ಸೇರಿದಂತೆ ನೂರಾರು ಮಹಿಳಾ ಕಾರ್ಮಿಕರು ಭಾಗವಹಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

16/12/2024 07:20 pm

Cinque Terre

2.24 K

Cinque Terre

0