ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ - ತಲೆ ಮರೆಸಿಕೊಂಡ ಆರೋಪಿ

ಕೊಡಗು: ಕ್ಷುಲ್ಲಕ ವಿಚಾರಕ್ಕೆ ಸಹೋದರರ ಮಧ್ಯೆ ನಡೆದ ಕಲಹ ತಮ್ಮನ ಕೊಲೆಯಲ್ಲಿ ಅಂತ್ಯವಾದ ಘಟನೆ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಣಚಲು ಗ್ರಾಮದ ಬಳಿ ನಡೆದಿದೆ.

ಸ್ಥಳೀಯ ನಿವಾಸಿ ಧರ್ಮ ಅಪ್ಪಣ್ಣ(53) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರ ಅಣ್ಣ ಪ್ರತು ಮಾಚಯ್ಯ(55) ಗುಂಡು ಹೊಡೆದಿರುವುದಾಗಿ ಆರೋಪಿಸಲಾಗಿದೆ. ಆರೋಪಿ ಕೋವಿ ಸಹಿತ ತಲೆ ಮರೆಸಿಕೊಂಡಿದ್ದಾನೆ.

ಸೋಮವಾರ ಬೆಳಗ್ಗೆ 9.30ರ ಸಮಯದಲ್ಲಿ ಸಹೋದರರ ನಡುವೆ ಕ್ಲುಲ್ಲಕ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಧರ್ಮನ ಮೇಲೆ ಪ್ರತು ಮಾಚಯ್ಯ ಹಲ್ಲೆ ನಡೆಸಿದ್ದಾನೆ. ಬಳಿಕ ಒಂಟಿ ನಳಿಗೆ ಕೋವಿಯಿಂದ ಗುಂಡು ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರೊಬೇಷನರಿ ಎಸ್.ಪಿ ಬೆನಕ ಪ್ರಸಾದ್ ಮತ್ತು ಗ್ರಾಮಾಂತರ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು. ಕೊಲೆ ಪ್ರಕರಣದ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಪ್ರಕರಣದ ಆರೋಪಿಯ ಸೆರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

Edited By : Ashok M
PublicNext

PublicNext

16/12/2024 08:41 pm

Cinque Terre

34.11 K

Cinque Terre

0

ಸಂಬಂಧಿತ ಸುದ್ದಿ