ಉಡುಪಿ: ಸಾವಿರಾರು ಸಸಿಗಳನ್ನು ನೆಟ್ಟು ವೃಕ್ಷ ಮಾತೆ ಎನಿಸಿಕೊಂಡಿದ್ದ ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿ ಗೌಡ ಅವರ ಅಗಲಿಕೆಯ ಸುದ್ದಿ ಬೇಸರ ತಂದಿದೆ.
ಅನೇಕ ವರ್ಷಗಳಿಂದ ಗಿಡ ನೆಡುವ ಕಾಯಕದಲ್ಲಿ ತೊಡಗಿದ್ದು, ಮನೆಯಲ್ಲಿ ತೀರಾ ಬಡತನವಿದ್ದರೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ ಪರಿಸರ ಪ್ರೇಮಿ ತುಳಸಿ ಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.ತುಳಸಿ ಗೌಡರ ಅಗಲುವಿಕೆಯಿಂದ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ, ಬಂಧುಗಳಿಗೆ ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಮತ್ತು ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
Kshetra Samachara
17/12/2024 02:53 pm