ಮಂಡ್ಯ: ೮೭ ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯದಲ್ಲಿಂದು ಏರ್ಪಡಿಸಿದ್ದ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಗೆ ಜನಸಾಗರವೇ ಹರಿದು ಬಂದಿದ್ದು, ದಾಖಲೆಯ ಮಟ್ಟದಲ್ಲಿ ಯಶಸ್ವಿಯಾಯಿತು.
ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಪ್ರಾರಂಭವಾದ ಕಾರ್ಯಕ್ರಮಕ್ಕೆ ಚಿಕ್ಕಮಗಳೂರಿನ ವಿನಯ್ ಗುರೂಜಿ, ನಿರ್ಮಲಾನಂದ ಸ್ವಾಮೀಜಿ ಚಾಲನೆ ನೀಡಿದ್ರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ನಟ ಡಾಲಿ ಧನಂಜಯ್, ನೀನಾಸಂ ಸತೀಶ್, ಸಪ್ತಮಿಗೌಡ ಮುಂತಾದವರು ಉಪಸ್ಥಿತರಿದ್ದರು.
ಚಳಿಯನ್ನು ಲೆಕ್ಕಿಸದೇ ವಿದ್ಯಾರ್ಥಿಗಳು, ನಾಗರೀಕರು ಮ್ಯಾರಥಾನ್ ನಲ್ಲಿ ಭಾಗವಹಿಸಿದರು. ಎಡಿಜಿಪಿ ಅಲೋಕ್ ಕುಮಾರ್ ಸತತವಾಗಿ ಏಳು ಕಿಲೋಮೀಟರ್ ಓಡಿ ಎಲ್ಲರ ಗಮನ ಸೆಳೆದರು.
PublicNext
17/12/2024 02:57 pm