ಚಿತ್ರದುರ್ಗ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಪಿ ಬಡಾವಣೆ ಚಿತ್ರದುರ್ಗ ಆವರಣದಲ್ಲಿ ಕ್ಷಯ ಮುಕ್ತ 100 ದಿನಗಳ ಅಭಿಯಾನ ಕಾರ್ಯಕ್ರಮ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಶಿಕ್ಷಣಾಧಿಕಾರಿ ಎನ್ಎಸ್ ಮಂಜುನಾಥ್ ಮಾತನಾಡಿ ಕ್ಷಯ ರೋಗವು ಭಾರತದ ಸಾರ್ವಜನಿಕ ಆರೋಗ್ಯಕ್ಕೆ ಅತಿ ದೊಡ್ಡ ತೊಂದರೆಗಳಲ್ಲಿ ಒಂದಾಗಿರುತ್ತದೆ ಪ್ರತಿ ವರ್ಷ ವಿಶ್ವದಲ್ಲೇ ಅತಿ ಹೆಚ್ಚು ಜನ ಕ್ಷಯರೋಗಕ್ಕೆ ತುತ್ತಾಗುತ್ತಾರೆ ಭಾರತವನ್ನು ಕ್ಷಯ ಮುಕ್ತಗೊಳಿಸಲು ಸಮುದಾಯವು ಒಗ್ಗುಡಿ ಕೆಲಸ ಮಾಡಬೇಕಾಗಿದೆ ಎಂದರು.
ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಾ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾನವಿನಿಂದ ಬರುತ್ತದೆ, ಕ್ಷಯರೋಗಿಯು ಕೆಮ್ಮಿದಾಗ ಅಥವಾ ಸೀಮಿದಾಗ ಹೊರಬರುವ ತುಂತುರು ರೋಗಾಣುಗಳು ಗಾಳಿಯ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಸೋಂಕು ಉಂಟುಮಾಡುತ್ತದೆ.
ಕ್ಷಯ ರೋಗಿಗಳು ಕೆಮ್ಮುವಾಗ ಹಾಗೂ ಸೇರುವಾಗ ಬಾಯಿ ಮತ್ತು ಮೂಗಿನ ಹತ್ತಿರ ಕರವಸ್ತ್ರ ಇಟ್ಟುಕೊಳ್ಳಬೇಕು, ರೋಗಿಯ ಕಫವನ್ನು ಮನಸ್ಸಿಗೆ ಬಂದ ಕಡೆ ಉಗಿಯಬಾರದು, ಕಫವನ್ನು ಡಬ್ಬಿಯಲ್ಲಿ ಶೇಖರಿಸಿ ಗುಂಡಿ ತೋಡಿ ಮುಚ್ಚಬೇಕು, ನವಜಾತ ಶಿಶುಗಳಿಗೆ ಬಿಸಿಜಿ ಲಸಿಕೆ ಹಾಕಿಸಬೇಕು ಎಂದರು.
Kshetra Samachara
17/12/2024 03:31 pm