ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೃಕ್ಷ ಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ‌‌ ಸಂತಾಪ

ಅಂಕೋಲಾ: ವೃಕ್ಷ ಮಾತೆ ತುಳಸಿ ಗೌಡ ಅವರ ನಿಧನದ ಹಿನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

Edited By : Nagaraj Tulugeri
PublicNext

PublicNext

17/12/2024 04:04 pm

Cinque Terre

22.78 K

Cinque Terre

0

ಸಂಬಂಧಿತ ಸುದ್ದಿ