ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೋರಟ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಈ ವೇಳೆ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಬಿ.ಎಂ ಪುಷ್ಪ ಮಾತನಾಡಿ, ಅಂಗನವಾಡಿ ನೌಕರರ ಹಲವು ಬೇಡಿಕೆಗಳ ಬಗ್ಗೆ ಕಳೆದ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತದೆ ಆದರೆ ಈವರೆಗೂ ಆಳುವ ಸರ್ಕಾರಗಳು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.
ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತದೆ ಪಾಲನೆ ಪೋಷಣೆ ಶಿಕ್ಷಣ ಸಂವಿಧಾನಬದ್ಧ ಕರ್ತವ್ಯಗಳಿವೆ. ಮತ್ತು 2013ರ ಆಹಾರ ಭದ್ರತಾ ಕಾಯ್ದೆ, 2009ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಕಾರ್ಯಕರ್ತರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಕೋರ್ಟ್ ಗಳು ಇವರಿಂದ ಮೂರು ಮತ್ತು ನಾಲ್ಕನೇ ಗ್ರೆಡ್ ನೌಕರರಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದು ತೀರ್ಪು ನೀಡಿದೆ ಮತ್ತು ಸುಪ್ರೀಂಕೋರ್ಟ್ 1972ರ ಗ್ರಾಚುಟಿ ಕಾಯ್ದೆಯಡಿ ಅರ್ಹರೆಂದು ತೀರ್ಪು ನೀಡಿದೆ ಆದರೆ ಕರ್ನಾಟಕ ರಾಜ್ಯದಲ್ಲಿ ಈ ವರೆಗೂ ಇದು ಜಾರಿಯಾಗಿಲ್ಲ ಎಂದರು.
Kshetra Samachara
17/12/2024 04:51 pm