ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಾಸ್ಟೆಲ್ ವಾರ್ಡನ್‌ನಿಂದ ಕಿರುಕುಳ, ರಸ್ತೆಗಿಳಿದ ವಿದ್ಯಾರ್ಥಿಗಳು

ಧಾರವಾಡ: ಧಾರವಾಡದ ಕೆಯುಡಿ ಆವರಣದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಾರ್ಡನ್ ಅರವಿಂದ ಜಾಧವ್ ಎಂಬುವವರು ಕಿರುಕುಳ ನೀಡುತ್ತಿದ್ದಾರೆ. ಅಲ್ಲದೇ ಸರ್ಕಾರದಿಂದ ಬಂದ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅನೇಕ ವಿದ್ಯಾರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಾರ್ಡನ್ ಅರವಿಂದ ಜಾಧವ್ ಅವರು ತಮಗೆ ಬೇಕಾದ ಕೆಲವೊಂದಿಷ್ಟು ವಿದ್ಯಾರ್ಥಿಗಳನ್ನು ದುಡ್ಡು ಪಡೆದು ಹಾಸ್ಟೆಲ್‌ನಲ್ಲಿ ಇಟ್ಟುಕೊಂಡಿದ್ದಾರೆ. ಹಾಸ್ಟೆಲ್‌ಗೆ ವಿದ್ಯಾರ್ಥಿಗಳಿಗಾಗಿ ಬರುವ ಸಾಬೂನು ಕಿಟ್, ಪಲ್ಲಂಗ, ಬೆಡ್, ಲಾಕರ್‌ಗಳನ್ನು ಸರ್ಕಾರದಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೀಡದೇ ವಿದ್ಯಾರ್ಥಿಗಳನ್ನು ಸೌಲಭ್ಯ ವಂಚಿತರನ್ನಾಗಿ ಮಾಡುತ್ತಿದ್ದಾರೆ. ತಮಗೆ ದುಡ್ಡು ಕೊಟ್ಟು ಹಾಸ್ಟೆಲ್‌ಗೆ ಬಂದ ವಿದ್ಯಾರ್ಥಿಗಳಿಗೆ ಮಾತ್ರ ಎಲ್ಲ ಸೌಲಭ್ಯ ನೀಡುತ್ತಿದ್ದು, ಇದರಿಂದ ಇನ್ನುಳಿದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಇದನ್ನು ಪ್ರಶ್ನೆ ಮಾಡಿದರೆ ವಾರ್ಡನ್ ಜಾಧವ್ ಅವರು ಸರಿಯಾಗಿ ಸ್ಪಂದಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಕಿರುಕುಳ ಕೊಡುತ್ತಾರೆ ಹಾಗೂ ಅಸಭ್ಯವಾಗಿ ವರ್ತನೆ ಮಾಡುತ್ತಾರೆ. ಊಟದಲ್ಲೂ ಕೂಡ ಕಲಬೆರಕೆ ಮಾಡುತ್ತಾರೆ. ಸ್ವಚ್ಛತೆ ಕಾಪಾಡುವುದಿಲ್ಲ. ಅನಧಿಕೃತ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಇಟ್ಟುಕೊಂಡು ಅಧಿಕೃತ ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ವಸತಿ ನಿಲಯದ ವಿದ್ಯಾರ್ಥಿಗಳು ಒತ್ತಾಯಿಸಿದರು.

Edited By : Suman K
Kshetra Samachara

Kshetra Samachara

18/12/2024 12:19 pm

Cinque Terre

36.44 K

Cinque Terre

0

ಸಂಬಂಧಿತ ಸುದ್ದಿ