ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಬದುಕು ಕಟ್ಟಿಕೊಂಡ ಮಹಿಳೆಯರನ್ನು ಸುವರ್ಣಸೌಧಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆದುಕೊಂಡು ಹೋಗಿದ್ದಾರೆ.
ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಯಿಸಿದವರು, ಊರಿಗೆ ಹೋಳಿಗೆ ಊಟ ಬಡಿಸಿದವರು, ಫ್ಯಾನ್ಸಿ ಸ್ಟೋರ್, ವೆಜಿಟೆಬಲ್ ಸ್ಟೋರ್ ತೆರೆದವರು ಹೀಗೆ ಯೋಜನೆ ಲಾಭ ಪಡೆದು ಬದುಕು ಕಟ್ಟಿಕೊಂಡಿರುವ 22ಕ್ಕೂ ಹೆಚ್ಚು ಗೃಹಲಕ್ಷ್ಮೀ ಫಲಾನುಭವಿಗಳನ್ನು ಮನೆಗೆ ಕರೆಯಿಸಿ ಸುವರ್ಣ ವಿಧಾನಸೌಧಕ್ಕೆ ಕರೆದೊಯ್ದರು.
ಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಟಿಟಿ ವಾಹನದಲ್ಲಿ ಸುವರ್ಣಸೌಧಕ್ಕೆ ತೆರಳಿದ ಸಚಿವೆ ಸಿಎಂ, ಡಿಸಿಎಂ ಭೇಟಿಯಾಗಿ ಗೃಹಲಕ್ಷ್ಮೀ ಫಲಾನುಭವಿಗಳು ಸಂವಾದ ನಡೆಸಲಿದ್ದಾರೆ. ಬಳಿಕ ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡಲಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆ ವಿಸ್ತರಣೆ ಹಿನ್ನೆಲೆ ಸುವರ್ಣಸೌಧಕ್ಕೆ ತೆರಳುವ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಲೈಂಗಿಕ ಅಲ್ಪಸಂಖ್ಯಾತರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸನ್ಮಾನ ಮಾಡಲಾಗಿದೆ.
PublicNext
18/12/2024 01:16 pm