ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಚಾರ್ಮಾಡಿ ಮಸೀದಿಗೆ ನುಗ್ಗಿದ ತಂಡ, ಧರ್ಮಗುರುಗಳ ಮೇಲೆ ಹಲ್ಲೆ

ಮಂಗಳೂರು: ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು, ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬುವವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು, ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited By : Suman K
PublicNext

PublicNext

18/12/2024 01:34 pm

Cinque Terre

24.41 K

Cinque Terre

2

ಸಂಬಂಧಿತ ಸುದ್ದಿ