ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ, ಅಂಗನವಾಡಿ ನೌಕರರ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂ.ಜಿಲ್ಲಾ‌ ಅಂಗನವಾಡಿಯ ಸಾವಿರಾರು ನೌಕರರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೆಂ.ನಗರ ಜಿಲ್ಲಾ ಅಧ್ಯಕ್ಷ ಲೀಲಾವತಿ. ಟಿ ಮಾತನಾಡಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ ೩ ಮತ್ತು ೪ ಎಂದು ಪರಿಗಣಿಸಿ ಖಾಯಂ ಮಾಡಿ ಎಂದು ಪ್ರತಿಭಟಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅಂಗನವಾಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಸಂಬಳ ಹೆಚ್ಚಿಸುವುದಾಗಿ ತಿಳಿಸಿದರು. ಆದರೆ ಯಾವುದೇ ರೀತಿಯಲ್ಲೂ ಸಮಸ್ಯೆ ನಿವಾರಣೆಯಾಗಿಲ್ಲ ಎಂದು ಆಗ್ರಹಿಸಿದರು.

Edited By : Ashok M
PublicNext

PublicNext

18/12/2024 02:30 pm

Cinque Terre

15.85 K

Cinque Terre

0

ಸಂಬಂಧಿತ ಸುದ್ದಿ