ಮಂಗಳೂರು: ಪ್ರಖ್ಯಾತ ಭರತನಾಟ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ಕಮಲಾ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ.
ನಾಟ್ಯಾಲಯ ಉರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಸುಮಾರು 45 ವರ್ಷಗಳಿಂದ ನೃತ್ಯಗುರುವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಮಲಾ ಭಟ್ ಅವರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಕರ್ನಾಟಕ ಕಲಾಶ್ರೀ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಉಡುಪಿ ಪೇಜಾವರ ಮಠದ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳು ಲಭಿಸಿವೆ. ಇವರು ರಾಜ್ಯದ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ ಕಾರ್ಯಕ್ರಮಗಳನ್ನು ನೀಡಿ ಪ್ರಶಂಸೆಗೆ ಪಾತ್ರರಾಗಿದ್ದರೆ. ಕಮಲಾ ಭಟ್ ಅವರು ಉಳ್ಳಾಲ ಮೋಹನ್ ಕುಮಾರರ ಶಿಷ್ಯೆ.
Kshetra Samachara
18/12/2024 04:04 pm