ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ ಅಂತ್ಯ

ಕೋಲಾರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವು ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಧರಣಿಯನ್ನು ಮುಕ್ತಾಯಗೊಳಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಂಜಲಮ್ಮ ಮಾತನಾಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ, ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ. 2013ರ ಆಹಾರ ಭದ್ರತಾಕಾಯ್ದೆ, 2009ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ಗಳು ಅವರನ್ನು 3 ಮತ್ತು 4 ಗ್ರೇಡ್‌ನ ನೌಕರರನ್ನಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದು ನಿಯಮ ಇದ್ದರೂ ಜಾರಿ ಮಾಡಿಲ್ಲ ಎಂದು ಆರೋಪಿಸಿದರು.

Edited By : PublicNext Desk
PublicNext

PublicNext

18/12/2024 04:25 pm

Cinque Terre

10.48 K

Cinque Terre

0

ಸಂಬಂಧಿತ ಸುದ್ದಿ