ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರರು, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ನೀರು ಘಂಟಿಗರು, ಜವಾನ, ಸ್ವಚ್ಛತಾ ಕೆಲಸಗಾರರನ್ನು ಏಕ ಕಾಲದಲ್ಲಿ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಟ ವೇತನವನ್ನು 31 ಸಾವಿರ ರೂ ಗಳಿಗೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಕೊಡಗು ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಕೆಲಸ ಕಾರ್ಯಗಳಾಗದೆ ಜನ ಸಾಮಾನ್ಯರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಹುದ್ದೆ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
PublicNext
18/12/2024 04:39 pm