ಟೆಂಪೋ ಹಾಗೂ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಮೂರು ದ್ವಿಚಕ್ರ ವಾಹನಗಳಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ. ಇಲ್ಲಿನ ಎನ್. ವಡ್ಡಹಳ್ಳಿ ಬಾಗೇಪಲ್ಲಿ ಮುಖ್ಯ ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ರಾಧಪ್ಪ, ವೆಂಕಟರಾಮಪ್ಪ ಹಾಗೂ ಇವರ ಪತ್ನಿ ಅಲುಮೇಲಮ್ಮ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
18/12/2024 04:52 pm