ಹಿರಿಯೂರು: 3ನೇ ಬಾರಿಗೆ ಕೋಡಿ ಬೀಳುವ ಕ್ಷಣಕ್ಕೆ ವಾಣಿವಿಲಾಸ ಸಾಗರ ಜಲಾಶಯ ಸಾಕ್ಷಿಯಾಗಲು ದಿನಗಣನೆ ಆರಂಭವಾಗಿದೆ. ಕೋಡಿ ಬಿದ್ದು ಹೊರ ಹರಿಯುವ ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಬರುವ ನಿರೀಕ್ಷೆ ಇದೆ. ಆದರೆ ಜಲಾಶಯದ ಬಳಿ ಪ್ರವಾಸಿಗರ ವಾಹನಗಳ ಪಾರ್ಕಿಂಗ್ ಸೇರಿ ಮೂಲ ಸೌಲಭ್ಯ ಒದಗಿಸುವುದೇ ದೊಡ್ಡ ಸವಾಲಾಗಿದೆ.
2022ರ ಸೆಪ್ಟೆಂಬರ್ 2ರಂದು ಜಲಾಶಯ ಇತಿಹಾಸದಲ್ಲೇ 2ನೇ ಬಾರಿಗೆ ಕೋಡಿ ಬಿದ್ದಾಗ ಅಪಾರ ಸಂಖ್ಯೆಯ ಜನರು ವೀಕ್ಷಿಸಿದ್ದರು. ಈ ಬಾರಿಯೂ ಲಕ್ಷಾಂತರ ಜನ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳವಾರ ನೀರಿನ ಮಟ್ಟ 128.95 ಅಡಿ ದಾಖಲಾಗಿತ್ತು. ಪೂರ್ಣಮಟ್ಟ 130 ಇದ್ದು ಭರ್ತಿಗೆ 1.05 ಅಡಿ ಮಾತ್ರ ಬಾಕಿ ಇದೆ. ಸಂಕ್ರಾಂತಿ ವೇಳೆಗೆ ಕೋಡಿ ಬೀಳುವ ಎಲ್ಲ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜಲಾಶಯವ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆ ಜಿಲ್ಲಾಡಳಿತದ ಮೇಲಿದೆ.
PublicNext
18/12/2024 04:53 pm