ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: KSRTC ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸುವಂತೆ ಜಿಲ್ಲಾಧಿಕಾರಿಗೆ ಕರವೇ ಮನವಿ

ಉಡುಪಿ: ನಗರದ ಕೆ.ಎಸ್. ಆರ್. ಟಿ.ಸಿ ಬಸ್ ನಿಲ್ದಾಣದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಮತ್ತು ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕೆ.ಎಸ್. ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಎ ಟಿ ಎಂ ಸೌಲಭ್ಯ ಇಲ್ಲ, ಮಹಿಳೆಯರು ಹಾಗೂ ಪುರುಷರಿಗೆ ಶೌಚಾಲಯಕ್ಕೆ 10 ರೂ ತೆಗೆದುಕೊಳ್ಳಲಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಕೆಲಸ ಮಾಡಲು ಕೇವಲ ಮೂರು ಮಹಿಳೆಯರಷ್ಟೇ ಇದ್ದಾರೆ. ಇಲ್ಲಿ ಪುರುಷ ಸಿಬ್ಬಂದಿಯ ಅಗತ್ಯವಿದೆ. ಶೌಚಾಲಯ ಶುಚಿತ್ವ ಇಲ್ಲದೆ ದುರ್ವಾಸನೆ ಬಂದು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ಹೆಚ್ಚಿದೆ.ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾಧ್ಯಕ್ಷೆ ಗೀತಾ ಪಾಂಗಾಳ, ಉಪಾಧ್ಯಕ್ಷರಾದ ದೇವಕಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/12/2024 05:09 pm

Cinque Terre

576

Cinque Terre

0

ಸಂಬಂಧಿತ ಸುದ್ದಿ