ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ - ಜಿಲ್ಲಾಡಳಿತಕ್ಕೆ ಮನವಿ, ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಅಹೋರಾತ್ರಿ ಧರಣಿ ಇಂದು ಅಂತ್ಯಗೊಂಡಿದೆ.

ಮೊದಲ ದಿನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೋರಟ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೆನ್ನೆ ರಾತ್ರಿಯೂ ಅಹೋರಾತ್ರಿ ಧರಣಿ ನಡೆಸಿದರು.

ಇಂದು ಸರ್ಕಾರಕ್ಕೆ ಗಡುವು ನೀಡಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ರಾಜ್ಯ ಹಾಗೂ ಸ್ಥಳೀಯ ಮಟ್ಟದಲ್ಲಿ ಆಗುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಮಾನವರಿಗೆ ಮಾಡಿಕೊಟ್ಟರು.

ಈ ವೇಳೆ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಬಿ.ಎಂ ಪುಷ್ಪ ಮಾತನಾಡಿ, ಅಂಗನವಾಡಿ ನೌಕರರ ಹಲವು ಬೇಡಿಕೆಗಳ ಬಗ್ಗೆ ಕಳೆದ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತದೆ ಆದರೆ ಈವರೆಗೂ ಆಳುವ ಸರ್ಕಾರಗಳು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು..

ಈ ವೇಳೆ ಉಪಾಧ್ಯಕ್ಷರುಗಳಾದ ಶಾರದ ,ಕಾಮಾಕ್ಷಿ ರಾಜು ,ಹೆಚ್.ಟಿ.ಮೀನಾಕ್ಷಿ ಕಾರ್ಯದರ್ಶಿಗಳಾದ ಟಿಹೆಚ್. ಜಯಂತಿ , ,ಕೆಪಿ.ವೀಣಾ ,ಸುಮಿತ್ರಾ , ವಿಣಾ ಗೀತಾ ಜರೀನಾ ಹಾಗು ಬಿಕೆ.ಸಂಗೀತ, ಪೂರ್ಣಿಮಾ ಇನ್ನಿತರರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

18/12/2024 05:14 pm

Cinque Terre

340

Cinque Terre

0

ಸಂಬಂಧಿತ ಸುದ್ದಿ