ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

*ಡಿ.೨೬, ೨೭ಕ್ಕೆ ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್‍ಯಕ್ರಮ - ಕೆಪಿಸಿಸಿ ಉಪಾಧ್ಯಕ್ಷ ಸಂಪಂಗಿ

ಹಾಸನ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಬೃಹತ್ ಅಧಿವೇಶನ ನಡೆಸಿದ ಹಿನ್ನೆಲೆಯಲ್ಲಿ ಆ ನೆನಪಿಗಾಗಿ ಶತಮಾನೋತ್ಸವ ಕಾರ್‍ಯಕ್ರಮವನ್ನು ಡಿ.೨೬ ಮತ್ತು ೨೭ರದು ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಸಂಪಂಗಿ ಹೇಳಿದರು

ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕಾರ್ಯಕರ್ತರ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರು ೧೯೨೪ರ ಡಿ.೨೬ರಂದು ಬೆಳಗಾವಿಯಲ್ಲಿ ಅಧಿವೇಶನ ಮಾಡಿದ್ದರು. ಅದರ ಸವಿನೆನಪಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ ಡಿ. ೨೬ರಂದು ಎಐಸಿಸಿಯ ವರ್ಕಿಂಗ್ ಕಮಿಟಿ ಸಭೆಯನ್ನು ನಡೆಸಲಾಗುವುದು.

೨೭ರಂದು ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ಗಾಂಧಿ, ಸೋನಿಯಾಗಾಂಧಿ ಸೇರಿದಂತೆ ಹಲವು ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿಯವರು ಸ್ವತಂತ್ರಕ್ಕಾಗಿ ಹೋರಾಟ ಮಾಡಿದ್ದರು. ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಪೂಜಿಸಲಾಗುತ್ತಿದೆ. ಇದಕ್ಕೆ ಕೆಲ ಸಂಘಟನೆಗಳೂ ಕೂಡ ಬೆಂಬಲಿಸುತ್ತಿವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ನಮ್ಮ ದೇಶವನ್ನು ರಾಮರಾಜ್ಯವನ್ನಾಗಿಸುವತ್ತ ಮುಂದಾಗಬೇಕು ಎಂದು ಹೇಳಿದರು.

ಹಾಸನ ಜಿಲ್ಲೆಯಿಂದ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುವ ಬಗ್ಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುತ್ತಿದ್ದು ಅದರಂತೆ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಲಾಗಿದೆ ಜೊತೆಗೆ ಪ್ರತಿಯೊಬ್ಬ ಕಾಂಗ್ರೆಸ್ ಮುಖಂಡನಿಗೂ ತನ್ನದೇ ಆದ ಜವಾಬ್ದಾರಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದರು.

ಈ ವೇಳೆ ಹಾಸನ ತಾಲೂಕು ಉಸ್ತುವಾರಿ ವಿಜಯ್ ಕುಮಾರ್, ಜಿಲ್ಲಾಧ್ಯಕ್ಷ ಲಕ್ಷ್ಮಣ್, ಮುಖಂಡರಾದ ದೇವರಾಜೆಗೌಡ, ಬನವಾಸೆ ರಂಗಸ್ವಾಮಿ, ತಾರಚಂದನ್, ಮುನಿಸ್ವಾಮಿ, ಶಶಿಧರ್, ಜಿ.ಎಸ್ ವಿಶ್ವನಾಥ್, ಮಲ್ಲಿಗೆವಾಳು ದೇವಪ್ಪ, ಅಶೋಕ್ ನಾಯಕರಹಳ್ಳಿ, ಕಬ್ಬಳಿ ರಾಮಚಂದ್ರ, ದಾಹುದ್, ನಾಗರಾಜ್, ರಂಜಿತ್, ಅಬ್ದ್ದುಲ್ ಕಯ್ಯುಮ್ , ಇತರರು.

Edited By : PublicNext Desk
Kshetra Samachara

Kshetra Samachara

18/12/2024 05:20 pm

Cinque Terre

165.42 K

Cinque Terre

0

ಸಂಬಂಧಿತ ಸುದ್ದಿ