ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರೇಮ ಪುರಾಣ ಬಹಿರಂಗ ನವದಂಪತಿಗಳ ಆತ್ಮಹತ್ಯೆಗೆ ಶರಣು

ಮಂಡ್ಯ : ವಿವಾಹಿತ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡು ಧಾರುಣ ಘಟನೆಯೊಂದು ಸಕ್ಕರೆ ನಾಡು ಮಂಡ್ಯದಲ್ಲಿಂದು ಜರುಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಘಟನೆ ನಡೆದಿದ್ದು ವಿವಾಹಿತ ಜೋಡಿಗಳ ಪ್ರೇಮ ಬಹಿರಂಗವಾದ ಕಾರಣ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.

ಕೆ.ಬೆಳ್ಳೂರಿನ ಸೃಷ್ಟಿ ಹಾಗೂ ಬನ್ನಹಳ್ಳಿ ಗ್ರಾಮದ ಪ್ರಸನ್ನ ಆತ್ಮಹತ್ಯೆಗೆ ಶರಣಾದ ವಿವಾಹಿತ ಪ್ರೇಮಿಗಳಾಗಿದ್ದಾರೆ. ಇಬ್ಬರು ಪ್ರೀತಿಸುತ್ತಿದ್ದರೂ ಮನೆಯಲ್ಲಿ ಒಪ್ಪದ ಕಾರಣ ಬೇರೆ ಬೇರೆ ವಿವಾಹವಾಗಿದ್ದರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇಬ್ಬರ ಪ್ರೀತಿ ಬಹಿರಂಗವಾದ ಹಿನ್ನಲೆಯಲ್ಲಿ ಅತ್ತ ಸೃಷ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ ಇತ್ತ ಪ್ರಿಯಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

Edited By : Nirmala Aralikatti
PublicNext

PublicNext

18/12/2024 05:54 pm

Cinque Terre

12.72 K

Cinque Terre

0