ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ರೈಲಿನಲ್ಲಿ ಮಹಿಳೆಯರಿದ್ದ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ್ದಾನೆ. ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು, ಕೊನೆಗೆ ಟಿಟಿಇ ಬಂದು ಆ ವ್ಯಕ್ತಿಯನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು ಎನ್ನುವುದು ಪ್ರತಿಯೊಬ್ಬರ ಜವಬ್ದಾರಿ. ಆದ್ರೆ ಕೆಲವು ಮಂದಿ ತಾವು ಎಲ್ಲಿದ್ದೇವೆ ಎಂಬುದನ್ನು ಮರೆತು ಅಸಂಬದ್ಧವಾಗಿ ವರ್ತಿಸುತ್ತಾರೆ. ಸದ್ಯ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬಟ್ಟೆ ಇಲ್ಲದೆ ಮಹಿಳಾ ಪ್ರಯಾಣಿಕ ರೈಲು ಬೋಗಿ ಏರಿ ದುರ್ವರ್ತನೆ ತೋರಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮುಂಬೈನಲ್ಲಿ ಕಲ್ಯಾಣ್‌ನಿಂದ ಛತ್ರವತಿ ಶಿವಾಜಿ ಮಹಾರಾಜ್ ಟರ್ಮಿನಸ್‌ಗೆ ಪ್ರಯಾಣಿಸುತ್ತಿದ್ದ ಲೋಕಲ್ ಟ್ರೈನ್ ಘಾಟ್‌ಕೋಪರ್ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭದಲ್ಲಿ ಸಂಪೂರ್ಣ ಬೆತ್ತಲಾಗಿದ್ದ ವ್ಯಕ್ತಿಯೊಬ್ಬ ರೈಲಿನ ಮಹಿಳಾ ಕೋಚ್‌ಗೆ ನುಗ್ಗಿದ್ದಾನೆ. ಈತನನ್ನು ಕಂಡು ಮಹಿಳಾ ಪ್ರಯಾಣಿಕರು ಭಯದಿಂದ ಕಿರಿಚಾಡಿದ್ದು, ನಂತರ ಟಿಟಿಇ ಸ್ಥಳಕ್ಕಾಗಮಿಸಿ ಆತನನ್ನು ಬಾಗಿಲಿನಿಂದ ಹೊರ ದಬ್ಬಿದ್ದಾರೆ.
santryal ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
PublicNext
18/12/2024 06:22 pm