ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಗಂಗೊಳ್ಳಿ ಬಂದರು ಕಾಮಗಾರಿ ಶೀಘ್ರ ಆರಂಭಕ್ಕೆ ಒತ್ತಾಯ - ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ( ಪಿಎಂಎಂವೈ ) ಯಡಿ ಸಂಸದರಾದ ಬಿ ವೈ ರಾಘವೇಂದ್ರ ರವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯ ಅಭಿವೃದ್ಧಿಗೆ 22.18 ಕೋ. ರೂ. ಮೊತ್ತಕ್ಕೆ ಕೇಂದ್ರ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು. ಶೇ 60:40 ಅನುಪಾತದಲ್ಲಿ ಈ ಯೋಜನೆ ಅನುಷ್ಠಾನ ಗೊಳ್ಳಲಿದ್ದು ರಾಜ್ಯದ ಪಾಲಿನ ಅನುದಾನ ಬಿಡುಗಡೆ ಬಾಕಿ ಇರುವುದರಿಂದ ಈ ಕೂಡಲೇ ಸದರಿ ಮೊತ್ತವನ್ನು ಬಿಡುಗಡೆ ಗೊಳಿಸಿ ಬಂದರಿನ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಬಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರಿಕೆ ಸಚಿವೆ ಮಾಂಕಾಳ ವೈದ್ಯ ಅವರನ್ನು ಆಗ್ರಹಿಸಿದ್ದಾರೆ.

.

ಗಂಗೊಳ್ಳಿ ಬಂದರಿನ ಅಭಿವೃದ್ಧಿಗೆ ಮಂಜೂರಾದ ಮೊತ್ತವನ್ನು ಕೂಡಲೇ ವಿನಿಯೋಗಿಸಲು ಬೈಂದೂರು ಶಾಸಕ ಗುರುರಾಜ್ ಗಂಟಿ ಹೊಳೆಯವರ ಚುಕ್ಕೆ ಗುರುತಿಲ್ಲದ ಪ್ರಶ್ನೆ ಗೆ ಬೆಳಗಾವಿ ಅಧಿವೇಶನದಲ್ಲಿ ಸಚಿವರು ಉತ್ತರಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/12/2024 08:38 pm

Cinque Terre

1.49 K

Cinque Terre

0

ಸಂಬಂಧಿತ ಸುದ್ದಿ